- Advertisement -
- Advertisement -



ಹಾಸನ : ನಗರಕ್ಕೆ ಸಮೀಪದ ಗುಟ್ಟೇನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ .ಗುಟ್ಟೇನಹಳ್ಳಿ ಗ್ರಾಮದ ನಿವಾಸಿ ರಾಕೇಶ್ (28) ಹಾಗೂ ನಗರದ ವಲ್ಲಭಾಯಿ ರಸ್ತೆಯ ಮಯೂರ (25) ಮೃತರು ಎಂದು ಗುರುತಿಸಲಾಗಿದೆ. ರಾಕೇಶ್ ಬೈಕ್‌ನಲ್ಲಿ ಸಂಚರಿಸುತ್ತಿದ್ದು, ಮಯೂರ ಅವರು ಹೊಂಡಾ ಆಕ್ಟಿವಾ ವಾಹನದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದಾಗ, ಅತಿವೇಗ ಮತ್ತು ನಿಯಂತ್ರಣ ತಪ್ಪಿದ ಕಾರಣ ಎರಡೂ ವಾಹನಗಳು ಮುಖಾಮುಖಿಯಾಗಿ ಢಿಕ್ಕಿ ಹೊಡೆದಿವೆ ಎನ್ನಲಾಗಿದೆ.
ಢಿಕ್ಕಿಯ ತೀವ್ರತೆಗೆ ಇಬ್ಬರು ಸವಾರರು ರಸ್ತೆ ಮೇಲೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದಿದೆ.
- Advertisement -








