ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣೆ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತ್ಯು..!




ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್ ಢಿಕ್ಕಿ ಹೊಡೆದು ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.
ಕೆಎಸ್ಸಾರ್ಟಿಸಿ ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣೆ ಇನ್ ಸ್ಪೆಕ್ಟರ್ ಶಕುನಿ ಗೌಡ (57) ಮೃತ ದುರ್ದೈವಿ.
ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಏಕಾಏಕಿ ವೇಗವಾಗಿ ಬಂದ ಕ್ಯಾಂಟರ್ ವಾಹನ ಅವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಢಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶಕುನಿಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








