Friday, July 31, 2026
spot_imgspot_img
spot_imgspot_img

ಹಾಸನ:ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ ಮಾಡಿದ ಪೋಷಕರು

- Advertisement -
- Advertisement -

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಅರಸೀಕೆರೆ ತಾಲ್ಲೂಕಿನ, ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ (18) ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್ 5 ರಂದು ಸಂಜೆ ಸುಮಾರು 6.30 ರ ಸಮಯದಲ್ಲಿ ಬಿ.ಹೆಚ್ ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ. ಪೋಷಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ನಂತರ ಮಗಳ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!