- Advertisement -
- Advertisement -
ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!




ಹಾಸನ : ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್‌ನಲ್ಲಿ ನಡೆದಿದೆ.
ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








