Friday, June 5, 2026
spot_imgspot_img
spot_imgspot_img

ಹಾಸನ: ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು..!

- Advertisement -
- Advertisement -

ಹಾಸನ: ಪದವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ. (21) ಎಂದು ಗುರುತಿಸಲಾಗಿದೆ.

ಕವನ ಹಾಸನ ನಗರದಲ್ಲಿ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಕುಸಿದು ಬಿದ್ದಿದ್ದಾಳೆ. ಪೋಷಕರು ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಿ ಕವನ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

- Advertisement -

Related news

error: Content is protected !!