Tuesday, July 28, 2026
spot_imgspot_img
spot_imgspot_img

ಹಾಸನ: ರಸ್ತೆ ದಾಟುವಾಗ ಕಾರು ಡಿಕ್ಕಿ – SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

- Advertisement -
- Advertisement -

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನುಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.

ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ

- Advertisement -

Related news

error: Content is protected !!