Tuesday, July 28, 2026
spot_imgspot_img
spot_imgspot_img

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು!

- Advertisement -
- Advertisement -

ಹಾಸನ: ಜಿಲ್ಲೆಯ ಹೊರವಲಯದ ಹನುಮಂತಪುರ ಬಳಿಯ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪುನೀತ್ (27) ಮೃತ ಯುವಕ. ಪುನೀತ್ ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಬುಧವಾರ ಎಂದಿನಂತೆಯೇ ಸಮವಸ್ತ್ರ ಧರಿಸಿ ಕೆಲಸಕ್ಕೆ ತೆರಳಿದ್ದ. ರಾತ್ರಿ ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದು ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶವಾಗಾರದ ಬಳಿ ನೂರಾರು ಮಂದಿ ಜಮಾಯಿಸಿದ್ದಾರೆ.

ಬುಧವಾರ ಮಧ್ಯಾಹ್ನದ ವೇಳೆ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಪುನೀತ್ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಆದರೂ ಮಾಹಿತಿ ನೀಡಿಲ್ಲ ಎಂದು ಕಾರ್ಖಾನೆ ಮೇಲಾಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪುನೀತ್ ಬೆಳಗ್ಗೆ ಸಮವಸ್ತ್ರದಲ್ಲೇ ಕೆಲಸಕ್ಕೆ ಹೋಗಿದ್ದು, ಮೃತಪಟ್ಟ ಬಳಿಕ ಸಮವಸ್ತ್ರ ಬದಲಿಸಲಾಗಿದೆ. ಪುನೀತ್ ಅವರದ್ದು ಸಹಜ ಸಾವಲ್ಲ, ಕೊಲೆ ಎಂದು ಕುಟುಂಬಸ್ಥರು ಹಾಗೂ ಸ್ನೇಹಿತರು ಆರೋಪಿಸಿದ್ದಾರೆ.

ಶೇ.80ಕ್ಕೂ ಹೆಚ್ಚು ಹೊರರಾಜ್ಯದ ಕಾರ್ಮಿಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರ್ಖಾನೆಯಲ್ಲಿ ಪದೇ ಪದೇ ಸಾವುಗಳು ಸಂಭವಿಸುತ್ತಿದ್ದು, ಪುನೀತ್ ಸ್ಥಳೀಯ ಆಗಿರುವುದರಿಂದ ಪ್ರಕರಣವನ್ನು ಮುಚ್ಚಿ ಹಾಕಲು ಸಾಧ್ಯವಾಗದೆ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಕಾರ್ಖಾನೆ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!