Sunday, June 14, 2026
spot_imgspot_img
spot_imgspot_img

ದ್ವೇಷ ಭಾಷಣ; ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ

- Advertisement -
- Advertisement -

ಉಡುಪಿ: ಎಸ್‌ಡಿಪಿಐ (SDPI) ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.

ಜುಲೈನಲ್ಲಿ ಬ್ರಹ್ಮಾವರ ತಾಲೂಕಿನ ಕುಂಜಾಲು ಬಳಿ ದನದ ತಲೆ ಪತ್ತೆಯಾಗಿತ್ತು. ಇದು ವ್ಯವಸ್ಥಿತ ಷಡ್ಯಂತ್ರ ಎಂದು ರಿಯಾಜ್ ಕಡಂಬು ಹೇಳಿಕೆ ನೀಡಿದ್ದರು. ಜುಲೈ 15 ರಂದು ಉಡುಪಿ ನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿತ್ತು. ಜಾಮೀನು ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ, ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಲು ರಾಜ್ಯ ಹೆದ್ದಾರಿಯಲ್ಲಿ ಹಸುವಿನ ತಲೆ ಮತ್ತು ದೇಹದ ಭಾಗಗಳು ಪತ್ತೆಯಾಗಿತ್ತು. ಹಿಂದೂಗಳ ಭಾವನೆಗೆ ಧಕ್ಕೆ ಎಂದು ಬಿಜೆಪಿ, ಹಿಂದೂಪರ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ಮಾಡಿತ್ತು. ಬ್ರಹ್ಮಾವರದಲ್ಲಿ ಹಸುವಿನ ದೇಹದ ಭಾಗಗಳನ್ನು ವಿಲೇವಾರಿ ಮಾಡಿರುವ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಉಡುಪಿ ಪಟ್ಟಣ ಪೊಲೀಸರು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ, ಬ್ರಹ್ಮಾವರದ ಕುಂಜಾಲು ಎಂಬಲ್ಲಿ ಹಸುವಿನ ತಲೆ ಮತ್ತು ಇತರ ದೇಹದ ಭಾಗಗಳನ್ನು ರಸ್ತೆಗೆ ಎಸೆದ ಘಟನೆಯು ಅಭಿವೃದ್ಧಿ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಂಘ ಪರಿವಾರದ ಕಾರ್ಯಕರ್ತರು ನಡೆಸಿದ ಸಂಘಟಿತ ಕೃತ್ಯವಾಗಿದೆ ಎಂದು ರಿಯಾಜ್ ಕಡಂಬು ಹೇಳಿದ್ದರು. ಈ ಘಟನೆಯಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದರು. ಘಟನೆಯ ಹಿಂದಿನ ವ್ಯಕ್ತಿಗಳನ್ನು ಪತ್ತೆಹಚ್ಚುವಂತೆ ಪೊಲೀಸರನ್ನು ಕೇಳಿಕೊಂಡಿದ್ದರು.

- Advertisement -

Related news

error: Content is protected !!