Monday, July 20, 2026
spot_imgspot_img
spot_imgspot_img

ಹಾವೇರಿ: ಎಥೆನಾಲ್ ಟ್ಯಾಂಕರ್ ಪಲ್ಟಿ; ಕ್ಷಣಾರ್ಧದಲ್ಲೇ ಧಗಧಗಿಸಿದ ಭೀಕರ ಬೆಂಕಿ!

- Advertisement -
- Advertisement -

ಹಾವೇರಿ: ರಾಣೆಬೆನ್ನೂರು ನಗರದ ಹೊರವಲಯದ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಭೀಕರ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಉರುಳಿ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಕಿಯ ಕೆನ್ನಾಲಿಗೆಗೆ ಟ್ಯಾಂಕರ್ ಬಹುತೇಕ ಸುಟ್ಟು ಭಸ್ಮವಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!