Saturday, June 28, 2025
spot_imgspot_img
spot_imgspot_img

ಮಹಿಳೆಯ ಅಪಹರಣ ಪ್ರಕರಣ : ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಎಚ್​​ಡಿ ರೇವಣ್ಣಗೆ ಬಿಗ್​ ರಿಲೀಫ್

- Advertisement -
- Advertisement -

ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಇದರಿಂದ ಎಚ್​ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇನ್ನು ಇದೇ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ. ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!