Thursday, April 25, 2024
spot_imgspot_img
spot_imgspot_img

ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು ಮುಚ್ಚುವುದೇ ಒಳ್ಳೆಯದು- ಕೇಂದ್ರದ ವಿರುದ್ಧ ಮಾಜಿ ಸಚಿವ ಎಚ್‍ಡಿ ರೇವಣ್ಣ ಕಿಡಿ.

- Advertisement -G L Acharya panikkar
- Advertisement -

ಹಾಸನ: ರಾಷ್ಟ್ರೀಕೃತ ಬ್ಯಾಂಕ್‍ಗಳು ರೈತರಿಗೆ ಹಣ ಕೊಡುತ್ತಿಲ್ಲ, ಹೀಗಾಗಿ ಅವುಗಳನ್ನು ಮುಚ್ಚುವುದು ಒಳ್ಳೆಯದು ಎಂದು ಮಾಜಿ ಸಚಿವ ಎಚ್‍ಡಿ ರೇವಣ್ಣ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ರೈತರಿಗೆ ಗೋಳು ಕೊಡುವ ಬ್ಯಾಂಕ್ ಎಂದರೆ ಅದು ರಾಷ್ಟ್ರೀಕೃತ ಬ್ಯಾಂಕ್‍ಗಳು. ಈ ರಾಷ್ಟ್ರೀಕೃತ ಬ್ಯಾಂಕ್‍ಗಳು ಬಡ ರೈತರಿಗೆ ಸಾಲ ಕೊಡುತ್ತಿಲ್ಲ. ರೈತರು ಒಂದು ಲಕ್ಷ ರೂ. ಸಾಲ ತೆಗೆದುಕೊಂಡರೇ ಒಂದು ವರ್ಷಕ್ಕೆ 5 ಲಕ್ಷ ರೂ. ಹಣ ಕಟ್ಟಿ ಎಂದು ಹೇಳುತ್ತಾರೆ. ಈ ಬ್ಯಾಂಕ್ ಗಳು ಉಳ್ಳವರಿಗೆ ಮಾತ್ರ ಉಪಯೋಗವಿದೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರು ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು ಮುಚ್ಚಲಿ ಎಂದು ಒತ್ತಾಯ ಮಾಡಿದರು.

ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ರೈತರ ಮನೆ ಹಾಳಾಗುತ್ತಿದೆ. ಮೋದಿಯವರೇ ನೀವೇ ಹೇಳಿ ಈ ಬ್ಯಾಂಕ್‍ಗಳು ಯಾಕೆ ಇದೆ ಎಂದು. ಈ ಬ್ಯಾಂಕ್‍ಗಳಿಂದ ಉಳ್ಳವರೆಗೆ ಸಾಲ ಕೊಡುತ್ತೇವೆ ಎಂದು ಒಂದು ಆದೇಶ ಹೊರಡಿಸಿ ಎಂದು ಕೇಂದ್ರ ಸರ್ಕಾರದ ವಿರುದ್ಧ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

- Advertisement -

Related news

error: Content is protected !!