Sunday, May 19, 2024
spot_imgspot_img
spot_imgspot_img

ಹೆಚ್‌.ಡಿ ರೇವಣ್ಣ ಮೇ.8 ರವರೆಗೆ ಎಸ್‌ಐಟಿ ವಶಕ್ಕೆ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನು ಕಿಡ್ನ್ಯಾಪ್​ ಮಾಡಿದ​ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ವೈದ್ಯಕೀಯ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು. ವಾದ-ಪ್ರತಿವಾದವನ್ನು ಆಲಿಸಿದ ಕೋರ್ಟ್‌ ನ್ಯಾಯಾಧೀಶರು, ರೇವಣ್ಣರನ್ನು 4 ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.

ಮಾಜಿ ಸಚಿವರ ವಿರುದ್ಧ ಸುಮಾರು 15 ಕ್ಕೂ ಹೆಚ್ಚು ಅಂಶಗಳನ್ನು ಉಲ್ಲೇಖಿಸಿ ಎಸ್‌ಐಟಿ 5 ದಿನ ಕಸ್ಟಡಿಗೆ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿತು.

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಪರ ವಕೀಲರು ಎಸ್​ಐಟಿ ಕಸ್ಟಡಿಗೆ ನೀಡುವುದನ್ನು ವಿರೋಧಿಸಿ ಆರೋಗ್ಯ ಸಮಸ್ಯೆ ಇರುವುದರಿಂದ ಕಸ್ಟಡಿಗೆ ನೀಡದಂತೆ ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಅಂದ್ರೆ ಮೇ 8ವರೆಗೆ ಎಸ್​ಐಟಿ ಕಸ್ಟಡಿಗೆ ನೀಡಿ ಮಹತ್ವದ ಆದೇಶ ನೀಡಿದ್ದಾರೆ.

- Advertisement -

Related news

error: Content is protected !!