Wednesday, August 5, 2026
spot_imgspot_img
spot_imgspot_img

ಕಮಿಷನ್ ದಂಧೆಗೆ ನಾಂದಿ ಹಾಡಿದ್ದು, ಅನ್ಯಪಕ್ಷಗಳ ಸರ್ಕಾರಗಳೇ ಹೊರತು ಜೆಡಿಎಸ್ ಸರ್ಕಾರವಲ್ಲ’- ಹೆಚ್‌ಡಿಕೆ ವಾಗ್ದಾಳಿ

- Advertisement -
- Advertisement -

ಗುತ್ತಿಗೆದಾರರಿಂದ ಕಮಿಷನ್‌ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡ ಕುಮಾರಸ್ವಾಮಿ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆ ಪ್ರಸ್ತಾಪ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಘನತವೇತ್ತ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಯೂಟರ್ನ್ ಹೊಡೆಯುವ ಅಗತ್ಯವೇ ಇಲ್ಲ. ಅವರು ಸತ್ಯವನ್ನೇ ನುಡಿದಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಸತ್ಯಮೇವ ಜಯತೇ ಘೋಷ ವಾಕ್ಯವನ್ನು ಕಾಂಗ್ರೆಸ್ ನಾಯಕರು ಅದೆಷ್ಟು ಶ್ರದ್ಧಾಭಕ್ತಿಯಿಂದ ಪರಿಪಾಲನೆ ಮಾಡುತ್ತಿದ್ದಾರೆ ಎಂಬುದಕ್ಕೆ ರಾಯರೆಡ್ಡಿ ಅವರ ಹೇಳಿಕೆಯೇ ಸಾಕ್ಷಿ.ಗುತ್ತಿಗೆಯಲ್ಲಿ ಪರ್ಸಂಟೇಜ್, ಕಮಿಷನ್ ದಂಧೆಗೆ ನಾಂದಿ ಹಾಡಿದ್ದು, ಅನ್ಯಪಕ್ಷಗಳ ಸರ್ಕಾರಗಳೇ ಹೊರತು ಜೆಡಿಎಸ್ ಸರ್ಕಾರವಲ್ಲ. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಗುತ್ತಿಗೆದಾರರಿಗೆ ನಿಯಮಿತವಾಗಿ ಹಣ ಪಾವತಿ ಆಗುತ್ತಿತ್ತು, ವಿಳಂಬ ಎನ್ನುವ ಪ್ರಶ್ನೆಯೇ ಇರಲಿಲ್ಲ. ನನ್ನ ಆಡಳಿತದಲ್ಲಿ ಕಮಿಷನ್ ದಂಧೆ ವಿಧಾನಸೌಧದ ಮೆಟ್ಟಿಲು ಮುಟ್ಟಲು ಬಿಟ್ಟಿರಲಿಲ್ಲ.ಸೋ ಕಾಲ್ಡ್ ಸತ್ಯಸಂಧರಾದ ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳಬೇಕು. ಭ್ರಷ್ಟಾಚಾರದ ವಿರುದ್ಧ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಯರೆಡ್ಡಿ ಹೇಳಿದ್ದಾರೆ. ಪಾಪ ಅವರು ಏಕಿಷ್ಟು ಹೆದರಿದರು ಎನ್ನುವುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಅಧಿಕಾರ ಮತ್ತು ಆಸರೆ ನಾಲಿಗೆಯ ಶಕ್ತಿಯನ್ನು ಕುಂದಿಸುತ್ತವೆ.

- Advertisement -

Related news

error: Content is protected !!