Saturday, November 14, 2026
spot_imgspot_img
spot_imgspot_img

ಥಾರ್‌, ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೆಸ್ಕಾಂ ಅಧಿಕಾರಿ ದುರ್ಮರಣ, ಮೂವರ ಸ್ಥಿತಿ ಗಂಭೀರ

- Advertisement -
- Advertisement -

ಚಿಕ್ಕಮಗಳೂರು: ಮಹೀಂದ್ರಾ ಥಾರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೆಸ್ಕಾಂ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಡೂರು ಸಮೀಪದ ಬುಕ್ಕಸಾಗರ ಗೇಟ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೆಸ್ಕಾಂನ ಎಇ ಸನತ್ (49) ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡ ಮೂವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ನಜ್ಜುಗುಜ್ಜಾಗಿವೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!