Thursday, November 26, 2026
spot_imgspot_img
spot_imgspot_img

ಸಾರಿಗೆ ಬಸ್‌-ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವು

- Advertisement -
- Advertisement -

ಗಂಗಾವತಿ : ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಯೋಧ್ಯ ಕ್ರಾಸ್ ಸಮೀಪದ ಹೊಸಳ್ಳಿ ಕ್ರಾಸ್ ಹಾಗೂ ಭಾರತ್ ಪೆಟ್ರೋಲ್ ಬಂಕ್ ನಡುವಿನ ರಸ್ತೆಯಲ್ಲಿ ಗುರುವಾರ(ನ.26) ಬೆಳಿಗ್ಗೆ ನಡೆದಿದೆ.

ಮೃತರನ್ನು ಅಯೋಧ್ಯ ಗ್ರಾಮದ ನಿವಾಸಿಗಳಾದ ಬಳೋಡೇಪ್ಪ(28) ಹಾಗೂ ಹುಸೇನಪ್ಪ(38) ಎಂದು ಗುರುತಿಸಲಾಗಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಡಿಪೋಗೆ ಸೇರಿದ ಸಾರಿಗೆ ಬಸ್ ಕಂಪ್ಲಿಯಿಂದ ಗಂಗಾವತಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರು ದಿಕ್ಕಿನಿಂದ ಬರುತ್ತಿದ್ದ ಬೈಕ್‌ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್‌ನಲ್ಲಿದ್ದ ಇಬ್ಬರೂ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!