- Advertisement -
- Advertisement -



ಚಿಕ್ಕಬಳ್ಳಾಪುರ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ಹೊನ್ನಪ್ಪನಹಳ್ಳಿ ಗ್ರಾಮದ ಒಬಳೇಷ್ (45) ಹಾಗೂ ಮಂಚೇನಹಳ್ಳಿಯ ಮೆಕ್ಯಾನಿಕ್ ಅಜ್ಗರ್ (35) ಎಂದು ಗುರುತಿಸಲಾಗಿದೆ.
ಎರಡು ಸ್ಪ್ಲೆಂಡರ್ ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸಹ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದು ಬೈಕ್‌ನಲ್ಲಿದ್ದ ಇಬ್ಬರು ಹಿಂಬದಿ ಸವಾರರು ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಒರ್ವನ ಸ್ಥಿತಿ ಗಂಭೀರ ಎಂದು ತಿಳಿದುಬಂದಿದೆ.
- Advertisement -








