Wednesday, May 22, 2024
spot_imgspot_img
spot_imgspot_img

ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಎರಡು ಸರ್ಕಾರಿ ಬಸ್‍ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಲ್ಲಿನ ವಿಜಯಪುರ ಮದಭಾವಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಂದಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ವೇಗವಾಗಿ ಬಂದ ಎರಡು ಬಸ್‍ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಡಿಕ್ಕಿಯ ರಭಸಕ್ಕೆ ಎರಡೂ ಬಸ್‍ಗಳ ಮುಂಭಾಗ ಭಾರೀ ಪ್ರಮಾಣದಲ್ಲಿ ಜಖಂ ಆಗಿದೆ. ಮುಂಭಾಗದಲ್ಲಿದ್ದವರಿಗೆ ತೀವ್ರ ಪೆಟ್ಟಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

- Advertisement -

Related news

error: Content is protected !!