Thursday, May 9, 2024
spot_imgspot_img
spot_imgspot_img

ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು..!

- Advertisement -G L Acharya panikkar
- Advertisement -

ಟ್ರಕ್ ಹಾಗೂ ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಬೀದರ್ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.

ಮೃತಪಟ್ಟವರನ್ನು ದಸ್ತ್ ಗಿರ್ ದಾವಲಸಾಬ್ (36) ರಸೀದಾ ಸೈಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಸೇಕ್ (51) ಎಂದು ಗುರುತಿಸಲಾಗಿದೆ.

ಅಂತ್ಯಕ್ರಿಯೆ ಮುಗಿಸಿ ವಾಪಸು ಬರುವಾಗ ಭೀಕರ ಅಪಘಾತ ನಡೆದಿದೆ. ದುರ್ಘಟನೆಯಲ್ಲಿ 10 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಬೀದರ್​ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಪಟ್ಟಿರುವ ಎಲ್ಲಾ ದುರ್ದೈವಿಗಳು ಮಹಾರಾಷ್ಟ್ರದ ಉದಗೀರ್ ಮೂಲದವರು ಎನ್ನಲಾಗಿದೆ.

ಟಾಟಾ ಏಸ್ ವಾಹನದಲ್ಲಿ ಒಟ್ಟು 14 ಮಂದಿ ಇದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಉದಗೀರ್​ನಿಂದ ಹೈದರಾಬಾದ್​​ಗೆ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗೆ ನಡೆದ ರಸ್ತೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!