Tuesday, April 30, 2024
spot_imgspot_img
spot_imgspot_img

ಪುತ್ತೂರು: ಪುತ್ತಿಲ ಪರಿವಾರ ಕಚೇರಿಗೆ ನುಗ್ಗಿದ ಯುವಕರ ತಂಡ

- Advertisement -G L Acharya panikkar
- Advertisement -

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ.

ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್‌ ಬನ್ನೂರು ಅವರನ್ನು ಗುರಿಯಾಗಿಟ್ಟುಕೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್‌ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್‌ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!