- Advertisement -
- Advertisement -



ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೇ 18ರಂದು ರಾತ್ರಿ ಹೊತ್ತು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಪು ತಾಲೂಕಿನ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಅಡ್ಡಾದಿಡ್ಡಿ ಕಾರು ಚಲಾಯಿಸಿ ಯುವಕನೋರ್ವನಿಗೆ ಡಿಕ್ಕಿ ಹೊಡೆಸಿದ್ದು,ತಲವಾರು ಹಿಡಿದು ಹೊಡೆದಾಟ ನಡೆಸಿ,ಜಗಳ ಮಾಡಿಕೊಂಡು ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಜೂನ್ 1 ರ ವರೆಗೆ ನ್ಯಾಯಂಗ ಬಂಧನ ವಿಧಿಸಿದ್ದಾರೆ.
- Advertisement -