- Advertisement -
- Advertisement -




ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ನಿನ್ನೆ (ಅಕ್ಟೋಬರ್ 06) ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ ಸುದರ್ಶನ್ ಬಲ್ಲಾಳ್ ಅವರು ದೇವೇಗೌಡ್ರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
- Advertisement -








