Wednesday, April 23, 2025
spot_imgspot_img
spot_imgspot_img

ಮಂಗಳೂರು: ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿಯನ್ನು ಹೊರ ತೆಗೆದ ವೆನ್ಲಾಕ್ ಆಸ್ಪತ್ರೆಯ ವೈದ್ಯರು !

- Advertisement -
- Advertisement -

ಮಂಗಳೂರು: ಹನ್ನೆರಡರ ಹರೆಯದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ನಗರದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವ ಮೂಲಕ ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಸ್ಸಾಂ ಮೂಲದ ಬಾಲಕ ಕಮಲ್ ಹಸನ್(12) ಇದೀಗ ಸಕಾಲದಲ್ಲಿ ದೊರೆತ ಚಿಕಿತ್ಸೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಬಾಲಕ ಕಮಲ್ ಹಸನ್ ಹೆತ್ತವರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಸಂಜೆಯ ಹೊತ್ತಿಗೆ ಮನೆ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಬಾಲಕನು ಕತ್ತರಿಸಲ್ಪಟ್ಟ ತೆಂಗಿನ ಗರಿಯ ಮೇಲೆ ಬಿದ್ದ ರಬಸಕ್ಕೆ ತೆಂಗಿನ ಗರಿಯು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಪೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು.ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಮಡಿಕೇರಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಪ್ರಾಥಮಿಕ ಚಿಕಿತ್ಸೆ ಮೂಲಕ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆ ತರಲಾಗಿತ್ತು ಎನ್ನಲಾಗಿದೆ. ಎರಡು ಗಂಟೆಗಳ ಶಸ್ತ್ರಚಿಕಿತ್ಸೆ: ಮಧ್ಯರಾತ್ರಿ ಹೊತ್ತಿಗೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಬಾಲಕ ಕಮಲ್ ಹಸನ್‌ನನ್ನು ದಾಖಲಿಸಲಾಗಿತ್ತು. ದೇಹಕ್ಕೆ ತೆಂಗಿನ ಗರಿ ಹೊಕ್ಕಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು ಇದನ್ನು ಸವಾಲಾಗಿ ಸ್ವೀಕರಿಸಿ ರಾತ್ರಿ 1:30 ರಿಂದ 3:30ರ ತನಕ ಶಸ್ತ್ರ ಚಿಕಿತ್ಸೆ ನಡೆಸಿ ಬಾಲಕನ ಕುತ್ತಿಗೆಯಿಂದ ಕೆಳ ಭಾಗಕ್ಕೆ ಸುಮಾರು 20 ಸೆ.ಮೀನಷ್ಟು ಕೆಳಕ್ಕೆ ಇಳಿದಿದ್ದ ತೆಂಗಿನ ಗರಿ ಮತ್ತು ಸ್ಟೀಲ್ ಚೈನ್‌ನ್ನು ಹೊರತೆಗೆದಿದ್ದಾರೆ.ಬಾಲಕ ಇದೀಗ ಈಗ ಐಸಿಯುನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಮತ್ತು ಡಿಎಂಒ ಡಾ. ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ. ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಬಹಳ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದೆ. ಒಂದು ವೇಳೆ ಇದು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ್ದಿದ್ದರೆ, 10 ಲಕ್ಷ ರೂ. ತನಕ ಖರ್ಚಾಗುತ್ತಿತ್ತು. ವೆನ್‌ವಾಕ್ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆಯ ಯಾವುದೇ ಖರ್ಚಿಲ್ಲದೆ ನಡೆಸಲಾಗಿದೆ. ವೈದ್ಯರ ಸಾಧನೆಯನ್ನು ಡಿಎಂಒ ಡಾ.ಶಿವಪ್ರಕಾಶ್ ಶ್ಲಾಘಿಸಿದ್ದಾರೆ. ಅಪರೂಪದ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ತಮ್ಮ ಮಗನ ಜೀವ ಉಳಿಸಿರುವ ವೆನ್ಲಾಕ್ ಆಸ್ಪತ್ರೆಯ ಎಲ್ಲ ವೈದ್ಯರಿಗೆ ಅಸ್ಸಾಂ ಮೂಲದ ಬಾಲಕನ ಪೋಷಕರಾದ ಅನ್ವರ್ ಹಾಗೂ ಅಸ್ಮಾ ಖಾತೂನ್ ಕೃತಜ್ಞತೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!