Wednesday, July 2, 2025
spot_imgspot_img
spot_imgspot_img

ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ..!

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ ಇದೀಗ ಶುರುವಾಗಿದೆ‌‌. ಬೇಸಿಗೆಯಲ್ಲಿ ಮಳೆ ಆರ್ಭಟ ಇರುವುದರಿಂದ ರೋಗಗಳು ಹರಡುವ ಸಾಧ್ಯತೆ ಇದೆ. ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ 910ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ದಾಖಲಾದರೆ, ಮಳೆ ಬಂದ ಬೆನ್ನಲ್ಲೇ ಒಂದೇ ವಾರದಲ್ಲಿ 75ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ಪತ್ತೆಯಾಗಿವೆ.

ಡೆಂಘಿ ಜೊತೆ ಚಿಕುನ್ ಗುನ್ಯಾ ಕೂಡಾ ಪತ್ತೆಯಾಗುತ್ತಿದ್ದು, ಕಳೆದ ಒಂದೇ ವಾರದಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ. ಜನವರಿಯಂದ ಇಲ್ಲಿಯವರೆಗೆ 260 ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಯೋಜನಾ ವಿಭಾಗದ ನಿರ್ದೇಶಕ ಅನ್ಸರ್ ಅಹಮ್ಮದ್ ತಿಳಿಸಿದ್ದಾರೆ.ಅಷ್ಟೇ ಅಲ್ಲದೆ ಜ್ವರದಿಂದ ಆಸ್ಪತ್ರೆಯತ್ತ ಮುಖ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ತಪಾಸಣೆ ನಡೆಸಿದಾಗ ಜನರಲ್ಲಿ ಡೆಂಘಿ ಹಾಗೂ ಚಿಕುನ್ ಗುನ್ಯಾ ಲಕ್ಷಣಗಳು ಕಾಣಿಸುತ್ತಿವೆ. ಚಿಕನ್ ಗುನ್ಯಾ ಹಾಗೂ ವೈರಲ್ ಜ್ವರ ಕೂಡಾ ಹೆಚ್ಚಾಗುತ್ತಿರುವ ಕಾರಣ ಜನರು ಎಚ್ಚರವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

- Advertisement -

Related news

error: Content is protected !!