Thursday, May 2, 2024
spot_imgspot_img
spot_imgspot_img

ಸೀತಾಫಲದ ಆರೋಗ್ಯ ಪ್ರಯೋಜನ

- Advertisement -G L Acharya panikkar
- Advertisement -

ಸೀತಾಫಲದಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳಿದ್ದು ದೇಹಕ್ಕೆ ಎರಗುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳಿಂದ ರಕ್ಷಿಸುವ ಜೊತೆಗೆ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಅಲ್ಲದೇ ಇದರಲ್ಲಿ ಪೊಟ್ಯಾಶಿಯಂ ಮತ್ತು ಮೆಗ್ನೀಶಿಯಂ ಸಹಾ ಉತ್ತಮ ಪ್ರಮಾಣದಲ್ಲಿದ್ದು ಹೃದಯದ ಕ್ಷಮತೆ ಹೆಚ್ಚಿಸಿ ಹೃದಯಸಂಬಂಧಿ ತೊಂದರೆಗಳಿಂದ ರಕ್ಷಿಸುತ್ತದೆ.

ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ.
ಸೀತಾಫಲ ಹಣ್ಣುಗಳಲ್ಲಿ ತಾಮ್ರದ ಅಂಶ ಮತ್ತು ನಾರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ ಎಂದು ಹೇಳುತ್ತಾರೆ. ಆರೋಗ್ಯಕರವಾದ ಜೀರ್ಣಾಂಗ ವ್ಯವಸ್ಥೆಯಲ್ಲಿ ಇದರ ಪಾತ್ರ ತುಂಬಾ ದೊಡ್ಡದು. ಮುಖ್ಯವಾಗಿ ನಾರಿನ ಅಂಶ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಮಲಬದ್ಧತೆ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತದೆ.

ಸೀತಾಫಲ ಹಣ್ಣು ದೇಹದಲ್ಲಿ ಹೆಚ್ಚಿನ ಶಕ್ತಿಯನ್ನು ಒಮ್ಮೆಲೆ ಉಂಟು ಮಾಡುವ ಗುಣ ಲಕ್ಷಣವನ್ನು ಪಡೆದುಕೊಂಡಿದೆ. ಹಾಗಾಗಿ ಯಾವುದೇ ಸಮಯದಲ್ಲಿ ಒಂದು ವೇಳೆ ನೀವು ಹೆಚ್ಚು ಸುಸ್ತು ಮತ್ತು ಆಯಾಸ ಕಂಡುಕೊಂಡ ಸಮಯದಲ್ಲಿ ಸೀತಾಫಲ ಹಣ್ಣನ್ನು ಸೇವನೆ ಮಾಡುವುದರಿಂದ ಅದರಲ್ಲಿರುವ ಪೊಟ್ಯಾಶಿಯಂ ಅಂಶ ಮಾಂಸಖಂಡಗಳ ದುರ್ಬಲತೆಯನ್ನು ಹೋಗಲಾಡಿಸಿ ತನ್ನಲ್ಲಿರುವ ಉತ್ತಮ ಪ್ರಮಾಣದ ಗ್ಲೈಸೆಮಿಕ್ ಸೂಚ್ಯಂಕದಿಂದ ದೇಹಕ್ಕೆ ಶಕ್ತಿಯನ್ನು ಒದಗಿಸಿ ಇಡೀ ದೇಹದ ತುಂಬಾ ಸರಾಗವಾದ ರಕ್ತಸಂಚಾರವನ್ನು ಉಂಟುಮಾಡುತ್ತದೆ. ಇದರಿಂದ ಇಡೀ ದೇಹ ಹೊಸ ಹುರುಪು ಮತ್ತು ಚೈತನ್ಯದಿಂದ ಕೂಡಿರುತ್ತದೆ.

ಸೀತಾಫಲಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ಆವರಿಸುವ ಸಾಧ್ಯತೆಯನ್ನು ದೂರ ಮಾಡಬಹುದು. ಈ ಹಣ್ಣಿನಲ್ಲಿ ಪೊಟ್ಯಾಶಿಯಂ ಹಾಗೂ ಮೆಗ್ನೀಶಿಯಂ ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸಲು ನೆರವಾಗುತ್ತವೆ. ಹಾಗೆಯೇ ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರಿಸುತ್ತವೆ. ಇದು ಮಧುಮೇಹದ ಸಮಸ್ಯೆಯನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ವಿಟಮಿನ್ ಬಿ 6 ಅಧಿಕವಾಗಿರುವ ಸೀತಾಫಲವನ್ನು ತಿನ್ನುವುದರಿಂದ ಶ್ವಾಸನಾಳದ ಉರಿಯೂತವನ್ನು ಕಡಿಮೆ ಮಾಡಬಹುದು. ಅಲ್ಲದೆ ಸೀತಾಫಲವು ಆಸ್ತಮಾ ಕಾಯಿಲೆಯನ್ನು ಕಡಿಮೆ ಮಾಡುತ್ತದೆ. ಜೊತೆಗೆ ಮೆಗ್ನೀಸಿಯಮ್ ಸಮೃದ್ಧವಾಗಿರುವ ಸೀತಾಫಲವು ಹೃದಯಾಘಾತದಿಂದ ರಕ್ಷಿಸುತ್ತದೆ.

- Advertisement -

Related news

error: Content is protected !!