Monday, April 29, 2024
spot_imgspot_img
spot_imgspot_img

ದಾಳಿಂಬೆ ಆರೋಗ್ಯದ ಮೇಲೆ ಮಾಡುವ ಚಮತ್ಕಾರಗಳು

- Advertisement -G L Acharya panikkar
- Advertisement -

ದಾಳಿಂಬೆ ಹಣ್ಣು ಮಧುಮೇಹ, ರಕ್ತದೊತ್ತಡವನ್ನು ಸುಧಾರಿಸುವುದಲ್ಲದೇ, ಆರೋಗ್ಯಕರವಾದ ಚರ್ಮ ಸೌಂದರ್ಯವನ್ನು ಪಡೆಯಲು ಸಹಾಯ ಮಾಡುತ್ತದೆ.ಪ್ರತಿಯೊಂದು ಹಣ್ಣು ತನ್ನದೇ ಆದ ವಿಟಮಿನ್‌ಗಳಿಂದ ಸಮೃದ್ಧವಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡುತ್ತಿವೆ. ಆ ಪಟ್ಟಿಯಲ್ಲಿ ಕೆಂಪು ಬಣ್ಣದ ದಾಳಿಂಬೆ ಹಣ್ಣು ಕೂಡ ಒಂದು.

ದಾಳಿಂಬೆ ಹಣ್ಣು ಆಂಟಿ ಆಕ್ಸಿಡೆಂಟ್, ಅಂಟಿ ವೈರಲ್ ಮತ್ತು ಆಂಟಿ ಟ್ಯೂಮರ್ ಗುಣಲಕ್ಷಣಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಇ ಮತ್ತು ಫೋಲಿಕ್ ಆಮ್ಲ ಕೂಡ ಇದೆ. ಪ್ರತಿನಿತ್ಯ ದಾಳಿಂಬೆಯನ್ನು ತಿನ್ನುವುದು ಅಥವಾ ಜ್ಯೂಸ್ ಕುಡಿಯುವುದು ನಿಮ್ಮ ರೋಗ ನಿರೋಧಕ ಶಕ್ತಿಗೆ ಅತ್ಯುತ್ತಮವಾಗಿ ಸಹಾಯ ಮಾಡುತ್ತದೆ. ಮಧುಮೇಹ, ರಕ್ತದೊತ್ತಡವನ್ನು ಸುಧಾರಿಸುವುದರ ಜೊತೆ ಜೊತೆಗೆ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

ದಾಳಿಂಬೆಯಲ್ಲಿ ನಾರಿನಂಶ ಅಧಿಕವಾಗಿರುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.ದಾಳಿಂಬೆ ಬೀಜಗಳು ನಿಮ್ಮ ರಕ್ತದ ಪ್ಲೇಟ್‌ಲೆಟ್‌ಗಳು ಹೆಪ್ಪು ಗಟ್ಟುವುದನ್ನು ತಡೆಯುತ್ತದೆ.ಹೃದಯ, ಅಪಧಮನಿಗಳು ಅಥವಾ ಆಂತರಿಕ ಹೆಪ್ಪುಗಟ್ಟುವಿಕೆಯಿಂದ ಕಾಪಾಡುತ್ತದೆ. ದಾಳಿಂಬೆಯಲ್ಲಿನ ಫೈಬರ್ ಅನ್ನು ಪಡೆಯುವುದು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುವುದಲ್ಲದೇ, ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ಇದರಲ್ಲಿನ ಪೊಟ್ಯಾಶಿಯಮ್ ಅಧಿಕ ರಕ್ತದೊತ್ತಡವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.ಒಂದು ಅಧ್ಯಯನದ ಪ್ರಕಾರ, ನಿಮ್ಮ ಸ್ಮರಣಾ ಶಕ್ತಿಯನ್ನು ಹೆಚ್ಚಿಸಲು ದಾಳಿಂಬೆ ನೆರವಾಗುತ್ತದೆ. ಹಾಗಾಗಿ ಪ್ರತಿನಿತ್ಯ ನಿಮ್ಮ ಮಕ್ಕಳಿಗೆ ದಾಳಿಂಬೆಯನ್ನು ಸೇವಿಸಲು ಸೂಚಿಸಿ.

ಗರ್ಭಿಣಿಯರು ದಾಳಿಂಬೆ, ಸೇಬು, ಸ್ಟ್ರಾಬೆರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಮಗುವು ಆರೋಗ್ಯಕರವಾಗಿ ಬೆಳೆಯುತ್ತದೆ. ದಾಳಿಂಬೆಯಲ್ಲಿ ಕಬ್ಬಿಣದ ಅಂಶವು ಸಮೃದ್ಧವಾಗಿದೆ. ಇದು ಕಬ್ಬಿಣದ ಕೊರತೆಯನ್ನು ತಡೆಯಲು ಸಹಾಯ ಮಾಡುತ್ತದೆ.

- Advertisement -

Related news

error: Content is protected !!