Sunday, June 21, 2026
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಅಧ್ಯಕ್ಷ ಹರೀಶ್ ಇಂಜಾಡಿ ಸೇರಿದಂತೆ ವ್ಯವಸ್ಥಾಪನಾ ಸಮಿತಿಯ ಎಲ್ಲಾ ಸದಸ್ಯರಿಗೆ ಹೈಕೋರ್ಟ್ ನೋಟೀಸು ಜಾರಿ…!

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದೂಡಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕಗೊಂಡಿರುವ ವ್ಯವಸ್ಥಾಪನಾ ಸಮಿತಿಯ ಆದೇಶದ ವಿರುದ್ದ ಅರ್ಜಿದಾರರು ತಡೆಯಾಜ್ಞೆ ಕೇಳುವಾಗ ಸರಕಾರವನ್ನು ಮಾತ್ರ ಪ್ರತಿವಾದಿಯನ್ನಾಗಿ ಮಾಡಿದ್ದರು. ಈ ಕೇಸಿನಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷನಾದ ತನ್ನನ್ನು ಕೂಡ ಪ್ರತಿವಾದಿಯನ್ನಾಗಿ ಮಾಡಬೇಕೆಂದು ಹರೀಶ್ ಇಂಜಾಡಿ ಯವರು ಹೈಕೋರ್ಟನ್ನು ಕೇಳಿಕೊಂಡಿದ್ದರು. ಈ ಎಲ್ಲದರ ಬಗ್ಗೆ ಜು.15 ರಂದು ಹೈಕೋರ್ಟಲ್ಲಿ ವಿಚಾರಣೆ ನಡೆಯಿತು.

ಅರ್ಜಿದಾರರ ಪರವಾಗಿ ನ್ಯಾಯವಾದಿ ವಿವೇಕ್ ಸುಬ್ಬ ರೆಡ್ಡಿಯವರು ವಾದ ಮಂಡಿಸಿದರೆ, ಸರಕಾರದ ಪರವಾಗಿ ಹೆಚ್ಚುವರಿ ಅಡ್ವಕೇಟ್ ಜನರಲ್ ದೇವದಾಸ್, ಹರೀಶ್ ಇಂಜಾಡಿಯವರ ಪರವಾಗಿ ಹಿರಿಯ ಕೌನ್ಸೆಲ್ ರವಿಶಂಕ‌ರ್ ಹಾಗೂ ನ್ಯಾಯವಾದಿ ಕರುಣಾಕರ ಗೌಡರು ವಾದ ಮಂಡಿಸಿದರು.ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ವ್ಯವಸ್ಥಾಪನಾ ಸಮಿತಿ ನೇಮಕದ ವಿರುದ್ದ ತಡೆಯಾಜ್ಞೆ ವಿಚಾರಣೆ ವೇಳೆ ಹರೀಶ್ ಇಂಜಾಡಿಯವರನ್ನು ಮಾತ್ರ ಪ್ರತಿವಾದಿಯಾಗಿ ಮಾಡಲು ಒಪ್ಪದೆ ವ್ಯವಸ್ಥಾಪನಾ ಸಮಿತಿಯ ಎಲ್ಲಾ ಒಂಬತ್ತು ಮಂದಿ ಸದಸ್ಯರನ್ನು ಪ್ರತಿವಾದಿಗಳನ್ನಾಗಿ ಮಾಡಿ ನೋಟೀಸು ಜಾರಿ ಮಾಡಲು ನ್ಯಾಯಮೂರ್ತಿಯವರು ನಿರ್ದೇಶಿಸಿದರೆಂದು ತಿಳಿದುಬಂದಿದೆ.

- Advertisement -

Related news

error: Content is protected !!