Friday, June 19, 2026
spot_imgspot_img
spot_imgspot_img

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು

- Advertisement -
- Advertisement -

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.

ತ್ರಿಲೋಕ್ ಜೈನ್(6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್ ಜೈನ್, ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದನು.

ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ.

ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮುಖ್ಯ ಶಿಕ್ಷಕರು ಬಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!