- Advertisement -
- Advertisement -






ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ವರ ಆರತಕ್ಷತೆ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.
ಪ್ರವೀಣ್ ಕುರಣಿ ಮೃತ ವರ. ಇಂದು ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರಣಿ ಹಾಗೂ ಪೂಜಾ ಎಂಬವರ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿತ್ತು. ಆದರೆ ವಿಧಿಯಾಟ ಬೇರೆಯೇ ಇತ್ತು. ಆರತಕ್ಷತೆ ಮುಗಿಯುವಷ್ಟರಲ್ಲಿ ಮಧುಮಗ ಪ್ರವೀಣ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
- Advertisement -