Saturday, June 13, 2026
spot_imgspot_img
spot_imgspot_img

ಉಳ್ಳಾಲ ಮಗನ ಸಾವಿಗೆ ಮನನೊಂದು ತಂದೆಯೂ ಆತ್ಮಹತ್ಯೆ ಶರಣು

- Advertisement -
- Advertisement -

ಉಳ್ಳಾಲ : ಮಗನ ಸಾವಿನ ನಂತರ ಮನನೊಂದ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ ಕುಂಬಳೆ ಎಂಬಲ್ಲಿ ನಡೆದಿದೆ. ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಮೃತ ವ್ಯಕ್ತಿ.

ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದು, ಬಳಿಕ ರಾಜೇಶ್ ನ ಮೃತದೇಹ 12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು.

ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್ ನೊಂದು ಕುಗ್ಗಿ ಹೋಗಿದ್ದರು ಎಂದು ಪರಿಸರ ನಿವಾಸಿಗಳು ತಿಳಿಸಿದ್ದಾರೆ. ನಿನ್ನೆ ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ನಲ್ಲಿ ವಾಟ್ಸಪ್ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು” ನಾನು ಮೊಬೈಲ್ ಕೊಂಡು ಹೋಗುವುದಿಲ್ಲ ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು. ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕಾಲ್ ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು.

ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದು, 11.00 ಗಂಟೆ ವೇಳೆ ಲೋಕೇಶ್ ರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ. ಬಳಿಕ ಮೃತದೇಹವನ್ನು ಉಳ್ಳಾಲ ಪೊಲೀಸರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಿ, ಇಂದು ಬೆಳಗ್ಗೆ ಮನೆಯವರಿಗೆ ಬಿಟ್ಟು ಕೊಟ್ಟರು. ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

- Advertisement -

Related news

error: Content is protected !!