Sunday, July 19, 2026
spot_imgspot_img
spot_imgspot_img

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

- Advertisement -
- Advertisement -

ಕಾರವಾರ: ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ , ಉಡುಪಿ , ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ .

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ದವಾಗಿದ್ದು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದಲ್ಲದೇ ಅಧಿಕ ಗಾಳಿ ಒತ್ತಡದಿಂದಾಗಿ ಕಾರವಾರ ಸೇರಿದಂತೆ ಕರಾವಳಿ ಮೀನುಗಾರರು ಮೀನುಗಾರಿಕೆ ಬಂದ್ ಮಾಡಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!