- Advertisement -
- Advertisement -
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜೀವನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು, ನದಿ ತೀರದ ಜನರು ಪ್ರವಾಹದ ಆತಂಕದಲ್ಲಿದ್ದಾರೆ.
ಬೆಂಗಳೂರಿನ ಹಲವೆಡೆ ಗುರುವಾರ ತಡರಾತ್ರಿಯಿಡಿ ಮಳೆಯಾಗಿದೆ. ಇಂದು ಸಂಜೆ ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲ ದಿನಗಳಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಅಘನಾಶಿನಿ, ಗಂಗಾವಳಿ, ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಕೆಲವೆಡೆ ನದಿ ತಟದಲ್ಲಿರುವ ಮನೆಗಳು ಮುಳುಗಿದೆ. ಇನ್ನೂ ಕೆಲವೆಡೆ ಗುಡ್ಡ ಕುಸಿದು ಅನಾಹುತ ಸಂಭವಿಸಿದೆ.
- Advertisement -