Monday, May 6, 2024
spot_imgspot_img
spot_imgspot_img

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಮಳೆ ಸಾಧ್ಯತೆ; ಉಡುಪಿ ಜಿಲ್ಲೆ ಆರೆಂಜ್, ದ.ಕ ಜಿಲ್ಲೆಗೆ ಎಲ್ಲೋ ಅಲರ್ಟ್

- Advertisement -G L Acharya panikkar
- Advertisement -
vtv vitla

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ-ವಾಯುವ್ಯಕ್ಕೆ ಚಲಿಸುತ್ತದೆ.

ಹೀಗಾಗಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 01ರವರೆಗೆ ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ ಸಾಧಾರಣದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ಕರಾವಳಿಯಲ್ಲಿ 40-45 ಕಿ.ಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ. ಮುಂದಿನ 3 ದಿನಗಳಲ್ಲಿ (ಅ. 2ವರೆಗೆ) ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಆರೆಂಜ್ ಅಲರ್ಟ್: ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಸೆ.29ರಿಂದ ಸೆ.30ರ ಬೆಳಗ್ಗಿನವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ.

- Advertisement -

Related news

error: Content is protected !!