Saturday, July 5, 2025
spot_imgspot_img
spot_imgspot_img

ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

- Advertisement -
- Advertisement -

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದ
ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವುಗೊಳ್ಳುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ-ವಾಯುವ್ಯಕ್ಕೆ ಚಲಿಸುತ್ತದೆ. ಹೀಗಾಗಿ ಸಪ್ಟೆಂಬರ್ 29 ರಿಂದ ಅಕ್ಟೋಬರ್ 01 ರವರೆಗೆ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ಕರಾವಳಿಯಲ್ಲಿ 40-45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ, ಮುಂದಿನ 5 ದಿನಗಳಲ್ಲಿ (ಅ.2 ವರೆಗೆ) ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಸೆ.29ರಿಂದ ಸೆ.5ರ ಬೆಳಗಿನವರೆಗೆ ಆರಂಜ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ.

- Advertisement -

Related news

error: Content is protected !!