- Advertisement -
- Advertisement -



ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಗೆ ಮುಂಗಾರು ಪ್ರವೇಶಿಸಿದ ಬಳಿಕ ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದ್ದು, ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಸೋಮವಾರ ಜಿಲ್ಲೆಯಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ಮಳೆಯು ತುಸು ಬಿರುಸು ಪಡೆದುಕೊಂಡಿತ್ತು.
ಮಂಗಳೂರು ನಗರದ ಮತ್ತು ಗ್ರಾಮಾಂತರ ಭಾಗದಲ್ಲಿ ಮುಂಜಾನೆ ವೇಳೆ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದ್ದು, ಬಳಿಕ ಕಡಿಮೆಯಾಗಿದೆ. ಪುತ್ತೂರು, ಕಡಬ, ಸುಬ್ರಹ್ಮಣ್ಯ ಬಂಟ್ವಾಳ ಭಾಗದಲ್ಲಿಯೂ ಬೆಳಗ್ಗೆ – ಸಂಜೆ ವೇಳೆಯಲ್ಲಿ ಉತ್ತಮ ಮಳೆಯಾಗಿದೆ.
ಇನ್ನು ಹವಾಮಾನ ಇಲಾಖೆಯೂ ಇನ್ನು 3-4 ದಿನ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಜೂ.11ರಂದು ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಜೂ.12ರಂದು ಆರೆಂಜ್, ಜೂ.13 ಮತ್ತು 14ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
- Advertisement -