Saturday, April 20, 2024
spot_imgspot_img
spot_imgspot_img

ತೀವ್ರ ಮಳೆ ಹಿನ್ನಲೆ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ

- Advertisement -G L Acharya panikkar
- Advertisement -

ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

ಆದರೆ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಎಂದಿನಂತೆ ಕಾರ್ಯ ನಿರ್ವಹಿಸಲು ಹಾಗೂ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಆ ಮಕ್ಕಳಿಗೆ ಒಂದು ದಿನ ರಜೆ ಸಾರುವಂತೆ ಹಾಗೂ ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂರೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬಂದರೆ ಅವರನ್ನು ವಾಪಸ್ ಕಳುಹಿಸುವ ಮತ್ತು ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಡಿಸಿ ಸ್ಪಷ್ಟವಾಗಿ ಸೂಚಿಸಿದ್ದಾರೆ. ತಾಲೂಕುಗಳಲ್ಲಿ, ತಹಶೀಲ್ದಾರ್, ಶಿಕ್ಷಣ ಅಧಿಕಾರಿಗಳಿಗೆ ಗಳಿಗೆ ಪರಿಸ್ಥಿತಿಯನ್ನು ಅವಲೋಕಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದು ಡಿಸಿ ತಿಳಿಸಿದ್ದಾರೆ. ಇನ್ನು ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತೀವ್ರವಾದ ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ.

- Advertisement -

Related news

error: Content is protected !!