



ಅ.16ರಿಂದ 19ರವರೆಗೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.
ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.
ಇಂದಿನಿಂದ ಅ.19ರವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, , ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಅಕ್ಟೋಬರ್ 19ರವರೆಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅ.19ರವರೆಗೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ, ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.








