- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲ ಜಿಲ್ಲೆಗಳ ತಹಶೀಲ್ದಾರ್ ಹಾಗೂ ಜಲಾಶಯದ ಅಧಿಕಾರಿಗಳಿಗೆ ಯಾವುದೇ ರಜೆ ಇರಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೆಲ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗುತ್ತಿರುವ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಸಭೆ ನಡೆಸಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಎಲ್ಲ ತಹಶೀಲ್ದಾರ್ ಹಾಗೂ ಜಲಾಶಯದ ಅಧಿಕಾರಿಗಳ ರಜೆ ರದ್ದು ಮಾಡಲಾಗಿದೆ ಎಂದು ತಿಳಿಸಿದರು.
ಪ್ರತಿದಿನ ಜಲಾಶಯದ ನೀರಿನ ಮಟ್ಟದ ಬಗ್ಗೆಮಾಹಿತಿ ಬೇಕು. ಡ್ಯಾಂನಲ್ಲಿ ಶೇ.70 ಮಾತ್ರ ನೀರಿನ ಸಂಗ್ರಹವಿರಬೇಕು. ಅಧಿಕಾರಿಗಳೆಲ್ಲರೂ ವಾರ್ ಫೀಲ್ಡ್ ನಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
- Advertisement -