Thursday, May 2, 2024
spot_imgspot_img
spot_imgspot_img

ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆ; ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವು

- Advertisement -G L Acharya panikkar
- Advertisement -

ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ.

ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರಿನಲ್ಲಿ ನಡೆದಿದೆ. ಕುಂಬಳೂರಿನ ಲಕ್ಷ್ಮೀ ಹಾಗೂ ಕೆಂಚವ್ವ ದಂಪತಿಯ ಪುತ್ರಿ ಸ್ಫೂರ್ತಿ ಮನೆಯ ಗೋಡೆ ಕುಸಿದು ಅದರಡಿ ಸಿಲುಕಿ ದಾರುಣ ಅಂತ್ಯ ಕಂಡ ಕಂದಮ್ಮ, ಕಳೆದ 4-5 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ತಂದೆ-ತಾಯಿ ಜೊತೆ ಮಲಗಿದ್ದ ಬಾಲಕಿ ಮೇಲೆ ಗೋಡೆ ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ.

ಹಾವೇರಿಯಲ್ಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತಪಟ್ಟ ಘಟನೆ ಮಾಳಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭಾಗ್ಯ ಚಳಮರದ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತೊಂದು ಮಗುವಿಗೂ ಗಾಯವಾಗಿದೆ.

- Advertisement -

Related news

error: Content is protected !!