Saturday, June 6, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ಸಂಚಾರ ಬಂದ್

- Advertisement -
- Advertisement -

ಸುಬ್ರಹ್ಮಣ್ಯ: ಮಳೆ ಆರ್ಭಟ ಜೋರಾಗಿರುವ ಕಾರಣ ರಸ್ತೆಗೆ ಮರ ಉರುಳಿ ಬಿದ್ದ ಕಾರಣ ಸಂಚಾರ ಸ್ಥಗಿತಗೊಂಡಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವ ಕಾರಣ ಬಿಸಿಲೆ – ಸುಬ್ರಹ್ಮಣ್ಯ, ನಡುವೆ ಸಂಚಾರ ಬಂದ್ ಆಗಿದೆ.

ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಸಮೀಪ ರಸ್ತೆಗೆ ಮರ ಉರುಳಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಸಂಚಾರ ಸಮಸ್ಯೆ ಉಂಟಾಗಿರುವ ಕಾರಣ ವಾಹನ ಸುಗಮ ಸಂಚಾರಕ್ಕೆ ಅಡಿಯುಂಟಾಗಿದೆ.

ಲೋಕೋಪಯೋಗಿ ಇಲಾಖೆ ಸಿಬ್ಬಂದಿಯಿಂದ ಮರ ತೆರವುಗೊಳಿಸುವ ಕಾರ್ಯ ಆರಂಭವಾಗಿದ್ದು, ಶೀಘ್ರದಲ್ಲಿ ಬಿಸಿಲ – ಸುಬ್ರಮಣ್ಯ, ನಡುವಿನ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಸಕಾರ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ.

- Advertisement -

Related news

error: Content is protected !!