Saturday, June 28, 2025
spot_imgspot_img
spot_imgspot_img

ವಿಟ್ಲ: ಭಾರೀ ಮಳೆ; ಮನೆ ಮೇಲೆ ಕುಸಿದು ಬಿದ್ದ ಕಾಂಪೌಂಡ್‌; ವಿಟ್ಲ ಪಟ್ಟಣ ಪಂಚಾಯತ್ ಪ್ರಾಕೃತಿಕ ವಿಕೋಪ ಕೇಂದ್ರದಿಂದ ನೆರವು

- Advertisement -
- Advertisement -

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ಕಾಂಪೌಂಡ್‌ ಮನೆ ಗೋಡೆ ಮೇಲೆ ಕುಸಿದು ಬಿದ್ದು, ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.

ಚಂದಳಿಕೆ ಕೃಷ್ಣಪ್ಪ ಎಂಬವರ ಮನೆ ಗೋಡೆ ಮೇಲೆ ಕಾಂಪೌಂಡ್‌ ಕುಸಿದು ಬಿದ್ದಿದ್ದು, ವಿಟ್ಲ ಪಟ್ಟಣ ಪಂಚಾಯತ್ ಪ್ರಾಕೃತಿಕ ವಿಕೋಪ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದು, ಪ್ರಾಕೃತಿಕ ವಿಕೋಪ ಸಹಾಯವಾಣಿ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ತಕ್ಷಣ ಕಾರ್ಯಪ್ರವೃತರಾಗಿದ್ದಾರೆ.

ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಪ್ರಾಕೃತಿಕ ವಿಕೋಪ ಸಹಾಯವಾಣಿ ಕೇಂದ್ರ 24X7 08255239220 ಸಂಪರ್ಕಿಸುವಂತೆ ತಿಳಿಸಿದ್ದಾರೆ.

- Advertisement -

Related news

error: Content is protected !!