Sunday, June 14, 2026
spot_imgspot_img
spot_imgspot_img

ಹೆಬ್ರಿ: ಸೌಹಾರ್ದ ಸೊಸೈಟಿ ಉದ್ಯೋಗಿ ನೇಣಿಗೆ ಶರಣು

- Advertisement -
- Advertisement -

ಹೆಬ್ರಿ: ಮನನೊಂದು ವಿವಾಹಿತನೋರ್ವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹಾಡಿಯಲ್ಲಿ ನಡೆದಿದೆ.

ಹೆಬ್ರಿ ಶಿವಪುರ ನಿವಾಸಿ ರಂಗನಾಥ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಹಿರಿಯಡ್ಕ ಸೌಹಾರ್ದ ಸೊಸೈಟಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

ಕಳೆದ ಕೆಲವು ದಿನಗಳಿಂದ ಯಾವುದೋ ವಿಚಾರಕ್ಕೆ ಸಂಬಂಧಿಸಿ ಮನನೊಂದಿದ್ದು, ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೇ ವಿಚಾರದಲ್ಲಿ ಮನನೊಂದು ಶಿವಪುರ ಗ್ರಾಮದ ಮೇಲ್ಮುಕ್ಕಾಣಿ ಹಾಡಿಯಲ್ಲಿರುವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Insta: glacharyajewellers
Fb: glacharya
- Advertisement -

Related news

error: Content is protected !!