ಬ್ರಹ್ಮಾವರ/ಹೆಬ್ರಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಇದೀಗ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ 7 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಕಾರ್ಕಡದಲ್ಲಿರುವ ಆಯುಷ್ ವೈದ್ಯರ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು.
ಈ ವೇಳೆಯಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 9 ಸಿಬ್ಬಂದಿಗಳ ಪೈಕಿ ವೈದ್ಯರು ಸೇರಿದಂತೆ ಒಟ್ಟು 7 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ವೈದ್ಯರು ಹಾಗೂ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಉಳಿದ ಸಿಬ್ಬಂದಿಗಳನ್ನು ಕೂಡ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಆರೋಗ್ಯ ಸಿಬ್ಬಂದಿಗಳ ಜೊತೆಗೆ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮಾಡುತ್ತಿದ್ದಾರೆ.