Tuesday, July 28, 2026
spot_imgspot_img
spot_imgspot_img

ಆನೆ ಮೇಲೆ ಸವಾರಿ-ನಟ ಧನ್ವೀರ್ ‌ಮೇಲೆ ಪ್ರಕರಣ ದಾಖಲು

- Advertisement -
- Advertisement -

ಗೋಣಿಕೊಪ್ಪಲು (ಅ.25) : ತಿಂಗಳ ಹಿಂದೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಅಕ್ರಮವಾಗಿ ಪ್ರವೇಶ ಪಡೆದು ಸಾಕಾನೆಯ ಮೇಲೆ ಸವಾರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಧನ್ವೀರ್‌ ಸೇರಿದಂತೆ ಆರು ಮಂದಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿಲಾಗಿದೆ.

ಚಿತ್ರನಟ ಧನ್ವೀರ್, ವಿಶ್ವಾಸ್ ಅಯ್ಯರ್, ದರ್ಶನ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಮತ್ತಿಗೋಡು ಸಾಕಾನೆ ಶಿಬಿರದ ಆರ್‌ಎಫ್‌ಒ ವೈ.ಕೆ.ಕಿರಣ್ ಕುಮಾರ್ ತಿಳಿಸಿದ್ದಾರೆ. ಎಲ್ಲರೂ ಬೆಂಗಳೂರಿನವರು ಎನ್ನಲಾಗಿದೆ.


ಆರೋಪಿಗಳು ‘ಮಹೇಂದ್ರ’ ಎಂಬ ಸಾಕಾನೆಯ ಮೇಲೆ ಕುಳಿತು ಸವಾರಿ ಮಾಡಿದ ಫೋಟೊವನ್ನು ಅ.23ರಂದು ಸಾಮಾಜಿಕ ಜಾಲ ತಾಣದಲ್ಲಿ ಹಾಕಿಕೊಂಡಿದ್ದರು. ಇದು ವೈರಲ್ ಆಗಿದ್ದು ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.

- Advertisement -

Related news

error: Content is protected !!