Monday, July 20, 2026
spot_imgspot_img
spot_imgspot_img

ಶೆಡ್‌ ಗೆ ಬೆಂಕಿ:ಇಬ್ಬರು ಮಕ್ಕಳು ಸಜೀವ ದಹನ

- Advertisement -
- Advertisement -

ಬೆಂಗಳೂರು, ಮೇ 11 : ಶೆಡ್‌ವೊಂದರಲ್ಲಿ ಆಕಸ್ಮಿಕಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಘಟನೆ ಕೊತ್ತನೂರು ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಸೋಮವಾರ ವರದಿಯಾಗಿದೆ.ಈ ಅವಘಡದಲ್ಲಿ ಅರ್ಜುನ್(5) ಹಾಗೂ ಆಶಾ(3) ಸಜೀವ ದಹನಗೊಂಡ ಮಕ್ಕಳು ಎಂದು ಗುರುತಿಸಲಾಗಿದೆ.ಕೂಲಿ ಕೆಲಸಕ್ಕೆಂದು ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್‌ ಹಾಕಿಕೊಂಡು ವಾಸವಿತ್ತು.

ಸೋಮವಾರ ಕೆಲಸಕ್ಕಾಗಿ ಪೊಷಕರು ಮಕ್ಕಳನ್ನು ಅಜ್ಜಿಯ ಬಳಿ ಬಿಟ್ಟು ಹೋಗಿದ್ದರು. ಇನ್ನು, ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆದರೆ, ದುರಾದೃಷ್ಟವಶಾತ್ ಅಷ್ಟರಲ್ಲಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನಾ ಸ್ಥಳಕ್ಕೆ ಕೊತ್ತನೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ.

- Advertisement -

Related news

error: Content is protected !!