Sunday, April 28, 2024
spot_imgspot_img
spot_imgspot_img

5, 8, 9 ಮತ್ತು 11 ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸುವಂತೆ ಹೈಕೋರ್ಟ್ ಆದೇಶ

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದರೆ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ.

ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ಯಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ಯಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಆದ್ರೆ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬಾಕಿ ಇರುವಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.

ಈ ಬೆನ್ನಲ್ಲೇ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ್ದಂತ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ಆ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರನ್ನೊಳಗೊಂಡ ನ್ಯಾಯಪೀಠವು ಕಾಯ್ದಿರಿಸಿದ್ದಂತ ತೀರ್ಪನ್ನು ಪ್ರಕಟಿಸಿದೆ.

ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದುವರೆಸುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದೆ. ಮುಂದಿನ ಶೈಕ್ಷಣಿಕ ವರ್ಷದೊಂದಿಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.

- Advertisement -

Related news

error: Content is protected !!