Saturday, August 8, 2026
spot_imgspot_img
spot_imgspot_img

ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ನೂತನ ದಾಖಲೆ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಫೌಝನ್ ರಾಜ್ಯ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ಮಾಣಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 14 ಮತ್ತು17 ವರ್ಷದ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟವು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನವೆಂಬರ್ 4 ಮತ್ತು 5 ರಂದು ನಡೆಯಿತು.


ಈ ಕ್ರೀಡಾಕೂಟದಲ್ಲಿ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಫೌಝನ್ ಉದ್ದ ಜಿಗಿತ ಸ್ಪರ್ಧೆಯಲ್ಲಿ 5.14 ಮೀಟರ್ ದೂರ ಜಿಗಿಯುವ ಮೂಲಕ 16 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು ಜಿಲ್ಲಾ ಮಟ್ಟದಲ್ಲಿ ನೂತನ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಕ್ರೀಡಾಕೂಟದಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಕೃತಿ ಎನ್ .ಪಿ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಎಚ್ ಆಳ್ವ ತರಬೇತಿ ನೀಡಿದ್ದಾರೆ.

- Advertisement -

Related news

error: Content is protected !!