Sunday, June 21, 2026
spot_imgspot_img
spot_imgspot_img

ಪ್ರಚೋದನಕಾರಿ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕ‌ರ್ ಭಟ್, ಶ್ರೀಕಾಂತ್ ಶೆಟ್ಟಿ ವಿರುದ್ಧ ಬಂಧನ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಆದೇಶ

- Advertisement -
- Advertisement -

ಬೆಂಗಳೂರು : ಪ್ರತ್ಯೇಕ ಪ್ರಕರಣಗಳಲ್ಲಿ ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕ‌ರ್ ಮತ್ತು ಶ್ರೀಕಾಂತ್ ಶೆಟ್ಟಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಎಫ್‌ಐಆ‌ರ್ ರದ್ದು ಕೋರಿ ಹೈಕೋರ್ಟ್‌ಗೆ ಕಲ್ಲಡ್ಕ ಪ್ರಭಾಕರ್ ಭಟ್, ಶ್ರೀಕಾಂತ್‌ ಶೆಟ್ಟಿ ಇಬ್ಬರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್.ಕೃಷ್ಣಕುಮಾ‌ರ್ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, “ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಹೀಗಾಗಿ ಮಧ್ಯಂತರ ತಡೆಯಾಜ್ಞೆ ನೀಡಬೇಕು” ಎಂದು ಮನವಿ ಮಾಡಿದರು.ಈ ವಾದ ಆಲಿಸಿದ ನ್ಯಾಯಪೀಠ, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪಪಟ್ಟಿ ಸಲ್ಲಿಸುವಂತಿಲ್ಲ.ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್‌ ಪೀಠ ಆದೇಶಿದೆ.

- Advertisement -

Related news

error: Content is protected !!