Saturday, May 18, 2024
spot_imgspot_img
spot_imgspot_img

ಹಿಜಾಬ್ ವಿವಾದ; ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು – ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

- Advertisement -G L Acharya panikkar
- Advertisement -

ಶಾಲಾ- ಕಾಲೇಜುಗಳಲ್ಲಿ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಯಾವುದನ್ನು ಧರಿಸುವಂತಿಲ್ಲ‌ಎಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಮುಂದಿನ ಆದೇಶದವರೆಗೆ ಹಿಜಾಬ್, ಕೇಸರಿ ಧರಿಸುವಂತಿಲ್ಲ.! ಹೈಕೋರ್ಟ್’ನಿಂದ ಮಧ್ಯಂತರ ಆದೇಶ

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಹಿಜಾಬ್ ಪರ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಮಧ್ಯಂತರ ಮೌಖೀಕ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಲು ನಿರಕಾರಸಿದೆ. ಈಗಾಗಲೇ ಕರ್ನಾಟಕದ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆಯಲ್ಲಿರುವ ಕಾರಣ ಮೊದಲು ತೀರ್ಪು ಬರಲಿ ಎಂದು ಅರ್ಜಿದಾರರಿಗೆ ತಿಳಿಸಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ರಾಜ್ಯ ಹೈಕೋರ್ಟ್ ನೀಡಿದ್ದ ಮೌಖಿಕ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರ ಪರ ವಕೀಲು ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು, ಆದರೆ ಹಿಜಾಬ್ ವಿವಾದವನ್ನು ಖಂಡಿತವಾಗಿಯೂ ಪರಿಗಣಿಸುತ್ತೇವೆ. ಆದರೆ ಹೈಕೋರ್ಟ್ ತೀರ್ಪು ಮೊದಲು ಬರಲಿ, ಆಮೇಲೆ ನೋಡೋಣ ಎಂದು ವಕೀಲ ಕಾಮತ್ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಹೇಳಿದ್ದಾರೆ.

ಕರ್ನಾಟಕದಲ್ಲಿ ಏನಾಗುತ್ತಿದೆ ಎಂದು ನೋಡುತ್ತಿದ್ದೇವೆ, ನಮಗೆ ಎಲ್ಲರ ಸಾಂವಿಧಾನ ಹಕ್ಕುಗಳನ್ನು ರಕ್ಷಿಸಬೇಕಿದೆ. ವಿದ್ಯಾರ್ಥಿಗಳ ಹಿತ ಕಾಪಾಡುವುದು ನಮ್ಮ ರಕ್ಷಣೆ, ಈ ವಿಚಾರ ಕುರಿತು ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳೂ ಯೋಚನೆ ಮಾಡಲಿ ಎಂದು ಕೂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಹೇಳಿದ್ದಾರೆ.

- Advertisement -

Related news

error: Content is protected !!