Saturday, April 27, 2024
spot_imgspot_img
spot_imgspot_img

15 ಭಾರತೀಯರಿದ್ದ ಸರಕು ಸಾಗಣೆ ಹಡಗು ಅಪಹರಣ

- Advertisement -G L Acharya panikkar
- Advertisement -

15 ಮಂದಿ ಭಾರತೀಯರಿದ್ದ ಸರಕು ಹಡಗನ್ನು ಸೊಮಾಲಿಯಾ ಬಳಿ ಅಪಹರಣ ಮಾಡಲಾಗಿದ್ದು, ಭಾರತೀಯ ನೌಕಾಪಡೆ ತೀವ್ರ ನಿಗಾ ಇರಿಸಿದೆ.

ಸೋಮಾಲಿಯಾ ಕರಾವಳಿಯ ಬಳಿ ಗುರುವಾರ ಸಂಜೆ ‘MV LILA NORFOLK’ ಎಂಬ ಸರಕು ಸಾಗಣೆ ಹಡಗನ್ನು ಅಪಹರಿಸಲಾಗಿದ್ದು, ಭಾರತೀಯ ನೌಕಾಪಡೆಯು ಅದರತ್ತ ಯುದ್ಧನೌಕೆಯನ್ನು ಕಳುಹಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಅಪಹರಿಸಿದ ಹಡಗಿನಲ್ಲಿ 15 ಭಾರತೀಯರಿದ್ದಾರೆ. ಸಿಬ್ಬಂದಿಯೊಂದಿಗೆ ಸಂವಹನವನ್ನು ಸ್ಥಾಪಿಸಲಾಗಿದೆ. ಸೇನಾ ಅಧಿಕಾರಿಗಳ ಪ್ರಕಾರ, ಸೊಮಾಲಿಯಾ ಕರಾವಳಿಯಲ್ಲಿ ಹಡಗನ್ನು ಅಪಹರಿಸಿರುವ ಬಗ್ಗೆ ಗುರುವಾರ ಸಂಜೆ ಮಾಹಿತಿ ಲಭಿಸಿದೆ. ಅಲ್ಲದೇ ಭಾರತೀಯ ನೌಕಾಪಡೆಯ ವಿಮಾನವು ಹಡಗಿನ ಮೇಲೆ ನಿಗಾ ಇರಿಸಿದೆ.

ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈ ಪರಿಸ್ಥಿತಿಯನ್ನು ನಿಭಾಯಿಸಲು ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ.

- Advertisement -

Related news

error: Content is protected !!