Sunday, May 5, 2024
spot_imgspot_img
spot_imgspot_img

ವಿಟ್ಲ : ಹಿಂ.ಜಾ.ವೇ. ಮುಖಂಡ ಅಕ್ಷಯ್‌ ರಜಪೂತ್‌ ಗಡಿಪಾರು ಪ್ರಕರಣ: ರಾಜ್ಯ ಕಾಂಗ್ರೆಸ್ ಸರಕಾರದ ಇಬ್ಬಗೆಯ ನೀತಿ, ಹಿಂದೂ ವಿರೋಧಿ ಧೋರಣೆಗೆ ವಿಟ್ಲ ಹಿಂಜಾವೇ ಉಗ್ರ ಖಂಡನೆ

- Advertisement -G L Acharya panikkar
- Advertisement -

ವಿಟ್ಲ : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ನಿನ್ನೆ ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದು, ಈ ಘಟನೆಯನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಖಂಡಿಸಿದೆ.

ಈ ಬಗ್ಗೆ ಮಾತನಾಡಿದ ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ನರಸಿಂಹ ಶೆಟ್ಟಿ ಮಾಣಿ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಹಿಂದೂ ಕಾರ್ಯಕರ್ತರನ್ನು, ಮುಖಂಡರನ್ನು ಧಮನಿಸುವ ಕಾರ್ಯ ನಡೆಯುತ್ತಿದೆ. ಇವುಗಳಿಗೆಲ್ಲಾ ಕಾರ್ಯಕರ್ತರು ಬೆದರುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳನ್ನು ಗಮಸಿದರೆ ಕಾನೂನನ್ನು ಯಾವ ರೀತಿ ಬಳಸಿಕೊಳ್ಳಬೇಕು ಎನ್ನುವ ಯೋಚನೆಯನ್ನು ಮಾಡದೆ ಕೇವಲ ಹಿಂದೂ ವಿರೋಧಿಯನ್ನು ಮಾತ್ರ ಅನುರಿಸುತ್ತಿದೆ.

ಹಿಂದುತ್ವಕ್ಕೋಸ್ಕರ, ಧರ್ಮಕ್ಕೋಸ್ಕರ, ಸಮಾಜಕ್ಕೋಸ್ಕರ ಕೆಲಸವನ್ನು ಮಾಡುತ್ತಿರುವಂತಹ ಹಿಂದು ಸಂಘಟನೆ ಕಾರ್ಯಕರ್ತರನ್ನು, ಮುಖಂಡರನ್ನು ಪ್ರಮುಖರನ್ನು ಗುರಿಯಾಗಿಸಿಕೊಂಡು ಅವರ ಮನಸ್ಥಿತಿಯನ್ನು ಅವರ ಮಾನಸಿಕಸ್ಥೈರ್ಯವನ್ನು ಕುಗ್ಗಿಸುವಂತಹ ಕೆಲಸವನ್ನು ರಾಜ್ಯ ಸರಕಾರ ಮತ್ತು ಇಲಾಖೆ, ಜಿಲ್ಲಾಡಳಿತ ಮಾಡುತ್ತಿದೆ. ಮಧ್ಯರಾತ್ರಿ ಕಾರ್ಯಕರ್ತರ ಹಿಂದೂ ಕಾರ್ಯಕರ್ತರ ಮನೆಗೆ ಬಂದು ಬಾಗಿಲನ್ನು ಬಡಿಯುವಂತಹದ್ದು, ಅವರಿಗೆ ಕಿರುಕುಳ ನೀಡುವುದು, ಗಡಿಪಾರು ಮಾಡುವುದು, ಗೂಂಡಾ ಕಾಯ್ದೆ ಹಾಕುವುದು, ಸಮಾಜಕ್ಕಾಗಿ ದುಡಿಯುವಂತಹ ಕಾರ್ಯಕರ್ತರನ್ನು ಗುರಿಯಾಗಿಸಿ ಈ ಕೆಲಸವನ್ನು ಮಾಡಲಾಗುತ್ತಿದೆ.

ಈ ರಾಜ್ಯದಲ್ಲಿ ಗಮನಿಸಿದಾಗ ಎಲ್ಲಾ ರೀತಿಯ ಬೆಳವಣಿಗೆಗಳನ್ನು ನೋಡುತ್ತಿದ್ದೇವೆ. ಉಗ್ರಗಾಮಿ ಸಂಘಟನೆಗಳಿಗೆ ಕುಮ್ಮಕ್ಕು ಕೊಡುವಂತದ್ದು, ಬಾಂಬ್ ಸ್ಫೋಟ ಹೀಗೆ ಹಲವಾರು ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ನೀಡುವಂತವರಿಗೆ ಕಾನೂನಿನಡಿಯಲ್ಲಿ ಯಾವುದೇ ಶಿಕ್ಷೆ ಇಲ್ಲ., ಮೊನ್ನೆ ಬಸ್ ನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಹಿಂದೂ ಯುವತಿಗೆ ಮುಸ್ಲಿಂ ಯುವಕನೋರ್ವ ಕಿರುಕುಳ ನೀಡಿದ್ದು, ಈ ವೇಳೆ ಯುವತಿ ಹಾಗೂ ಅವರ ಮನೆಯವರು ಕೇಸ್ ಹೋದ ಸಂದರ್ಭದಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೆ ಮುಂದೆ ನೋಡಿದ್ದು, ಹಿಂದೂ ಸಂಘಟನೆಗಳು ಕಾನೂನಿಗೆ ವಿರುದ್ಧವಾಗಿ ನಡೆಯುತ್ತಿರುವಂತಹ ಮತಾಂತರ, ಅಕ್ರಮ ಗೋ ಸಾಗಾಟ, ಗಾಂಜಾ ಮಾಫಿಯಾ ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ಖಂಡಿಸಿ ಅದರ ವಿರುದ್ಧ ಹೋರಾಟ ಮಾಡುತ್ತಿದ್ದು, ಹಿಂದೂ ಕಾರ್ಯಕರ್ತರು ಮನೆ-ಕುಟುಂಬಕ್ಕಿಂತಲೂ ಹೆಚ್ಚಾಗಿ ಸಮಾಜಕ್ಕೋಸ್ಕರ ಕೆಲಸ ಮಾಡುತ್ತಿದ್ದು, ಇಂತಹ ಕಾರ್ಯಕರ್ತರ ಮನಸ್ಥೈರ್ಯವನ್ನು ಕುಗ್ಗಿಸುವ ಕಾರ್ಯವನ್ನು ರಾಜ್ಯ ಸರಕಾರ, ಇಲಾಖೆ ಮಾಡುತ್ತಿದ್ದು ಇದನ್ನು ಹಿಂದು ಜಾಗರಣ ವೇದಿಕೆ ಖಂಡಿಸುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಉತ್ತರ ನೀಡಲಿದ್ದೇವೆ ಎಂದು ಹೇಳಿದರು.

- Advertisement -

Related news

error: Content is protected !!